ಸಾಂದರ್ಭಿಕ ಚಿತ್ರ 
ರಾಜ್ಯ

ಭಿಕ್ಷಾಟನೆ ದಂಧೆಗೆ ಕಡಿವಾಣ ಹಾಕಲು 8 ತಂಡಗಳ ರಚನೆ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಒಯ್ಯುವ ದಂಧೆಗೆ ಕಡಿವಾಣ ಹಾಕಲು ಬದ್ಧರಿದ್ದೇವೆ ಭಿಕ್ಷಾಟನೆ ಸಂಪೂರ್ಣ ನಿರ್ಮೂಲನೆ ನಮ್ಮ ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಗೃಹ, ಕಾರ್ಮಿಕ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬೆಂಗಳೂರು: ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಒಯ್ಯುವ ದಂಧೆಗೆ ಕಡಿವಾಣ ಹಾಕಲು ಬದ್ಧರಿದ್ದೇವೆ ಭಿಕ್ಷಾಟನೆ ಸಂಪೂರ್ಣ ನಿರ್ಮೂಲನೆ ನಮ್ಮ ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಗೃಹ, ಕಾರ್ಮಿಕ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಇಲಾಖೆ ಗುರುತಿಸಿದೆ. ವಿಶೇಷವಾಗಿ ಮಕ್ಕಳಿಗೆ ನಿಷೇಧಿತ ಮತ್ತು ಬರುವ ಮದ್ದು ನೀಡಿ ಭಿಕ್ಷಾಟನೆಗೆ ಬಳಸಿಕೊಳ್ಳುವುದು, ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದರು.

ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಹಾಗೂ ಈ ಚಟುವಟಿಕೆಯಲ್ಲಿ ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆಗಳ ಪಾತ್ರ ಹಾಗೂ ಸಹಕಾರದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳು ಸಂಪೂರ್ಣವಾಗಿ ಸಹಕಾರ ನೀಡಲಿವೆ ಎಂದರು.

ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೆ ಐದು ಬಾರಿ ಈ ಕುರಿತು ಚರ್ಚೆ ನಡೆಸಿದ್ದು, ಬೆಂಗಳೂರಿನಲ್ಲಿ 50ರಿಂದ 70ಕಡೆಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ವಶಕ್ಕೆ ಪಡೆದಿದ್ದು ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರದಿಂದ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ವರದಿ ನೀಡಿದ್ದಾರೆ. ಈ ಎಲ್ಲ ಮಾಹಿತಿಯನ್ನಾಧರಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಭಿಕ್ಷಾಟನೆ ಸಂಬಂಧ ವ್ಯಾಪಕವಾಗಿರುವುದನ್ನು ಗಮನಿಸಲಾಗಿದ್ದು ಭಿಕ್ಷಾಟನೆ ನಿಯಂತ್ರಣಕ್ಕೆ ನಿರ್ಧಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೆ ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ತಂಡಗಳನ್ನು ರಚಿಸಿ ಈ ಬಗ್ಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದರು.

ಮಕ್ಕಳ ಭಿಕ್ಷಾಟನೆಗೆ ಕಡಿವಾಣ ಹಾಕಲು, ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಿದ್ದು, ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ನೇತೃತ್ವ ವಹಿಸಿದ್ದಾರೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೆ ‘ಈ ಗುರುತು’ ಎಂಬ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದ್ದು ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT