ರಾಜ್ಯ

ಉಪರಾಷ್ಟ್ರಪತಿ ಚುನಾವಣೆಗೆ ಆಳ್ವ ನಾಮಪತ್ರ; ಟಿಎಂಸಿ, ಎಎಪಿ ಗೈರು

Srinivas Rao BV

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಆದರೆ ಟಿಎಂಸಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಗೈರಾಗಿದ್ದರು. 

ಆ.6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆ. 10 ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಪೂರ್ಣಗೊಳ್ಳಲಿದೆ.

ಎನ್ ಡಿಎ ಅಭ್ಯರ್ಥಿ ಜಗದೀಪ್ ಧನ್ಕರ್ ಅವರ ವಿರುದ್ಧ ಮಾರ್ಗರೇಟ್ ಆಳ್ವ ಸ್ಪರ್ಧಿಸಿದ್ದಾರೆ.ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಪಕ್ಷಗಳ ಸಭೆಗೂ ಟಿಎಂಸಿ ಹಾಗೂ ಆಮ್ ಆದ್ಮಿ ಪಕ್ಷಗಳು ಗೈರಾಗಿದ್ದವು. ಆದರೆ ಪವಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

SCROLL FOR NEXT