ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,013 ಸೇರಿ 1,478 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,478 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,90,057ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,478 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,90,057ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇನ್ನು ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,251 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,22,702ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,42,060ಕ್ಕೆ ಏರಿಕೆಯಾಗಿದೆ. ಇನ್ನು 7,866 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT