ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,285 ಸೇರಿ 1,552 ಮಂದಿಗೆ ಪಾಸಿಟಿವ್; ಒಂದು ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,91,609ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,91,609ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,090ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1,285 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,23,987ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1,384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,43,444ಕ್ಕೆ ಏರಿಕೆಯಾಗಿದೆ. ಇನ್ನು 8,033 ಸಕ್ರಿಯ ಪ್ರಕರಣಗಳಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.