ಕರ್ನಾಟಕ ಹೈಕೋರ್ಟ್ 
ರಾಜ್ಯ

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯ ಸರ್ಕಾರ ಹೊರಡಿಸಿದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಕಾಯ್ದೆಗೆ(ಮತಾಂತರ ನಿಷೇಧ) ಸುಗ್ರೀವಾಜ್ಞೆ, 2022 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ...

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಕಾಯ್ದೆಗೆ(ಮತಾಂತರ ನಿಷೇಧ) ಸುಗ್ರೀವಾಜ್ಞೆ, 2022 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಸಂಬಂಧ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮತಾಂತರ ನಿಷೇಧ ಕಾಯ್ದೆ ಅಸಹಿಷ್ಣುತೆಯನ್ನು ಪ್ರದರ್ಶಿಸುತ್ತದೆ. ಭಾರತೀಯ ಪ್ರಜಾಪ್ರಭುತ್ವವನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಜಾತ್ಯತೀತೆಯ ಮೇಲಿನ ದಾಳಿ ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿದೆ.

ದೆಹಲಿ ಮೂಲದ ಇವಾನೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರ ವಿಭಾಗೀಯ ಪೀಠ, ಈ ಸಂಬಂಧ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ ಮತ್ತು ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.

ಈ ಸುಗ್ರೀವಾಜ್ಞೆಯ ನಿಬಂಧನೆಗಳು ವ್ಯಕ್ತಿಯ ಆಯ್ಕೆಯ ಸ್ವಾತಂತ್ರ್ಯ, ಜೀವನ ಮತ್ತು ಸ್ವಾತಂತ್ರ್ಯದ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಪ್ರತಿಬಂಧಿಸುತ್ತದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯಕ್ಕೆ ಅಧಿಕಾರ ನೀಡುವುದರಿಂದ ಸುಗ್ರೀವಾಜ್ಞೆಯ ನಿಬಂಧನೆಗಳು ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ(ಮತಾಂತರ ನಿಷೇಧ)ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್