ರಾಜ್ಯ

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Shilpa D

ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ನಗರದಲ್ಲಿ ಬುಧವಾರ ಮಧ್ಯರಾತ್ರಿಯಿಂದ ಗುರುವಾರ ಮುಂಜಾನೆಯವರೆಗೆ 8 cm (82.6 mm) ಮಳೆಯಾಗಿದೆ ಮತ್ತು ಗರಿಷ್ಠ ತಾಪಮಾನ 30.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20.5 ಡಿಗ್ರಿಗಳಷ್ಟು ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿ ಮತ್ತು ಆರ್ದ್ರ ವಾತಾವರಣದಿಂದಾಗಿ ಭಾರೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಅಲರ್ಟ್ ಎಂದರೆ ಯಾವುದೇ ಅಪಾಯವಿಲ್ಲ, ಆದರೆ 7 ಸೆಂ.ಮೀ ವರೆಗೆ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಬೆಂಗಳೂರು ಪೂರ್ವ ವಲಯದ ಸಂಪಂಗಿ ರಾಮನಗರದಲ್ಲಿ ಬುಧವಾರ ಮಧ್ಯರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೆ ಅತಿ ಹೆಚ್ಚು ಅಂದರೆ 81.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ರಾತ್ರಿ 11 ಗಂಟೆಯಿಂದ ಆರಂಭವಾದ ಮಳೆ ರಾತ್ರಿಯಿಡೀ ಸುರಿದ ಪರಿಣಾಮ ಹಲವು ರಸ್ತೆಗಳು ಮತ್ತು ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು.

SCROLL FOR NEXT