ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,154 ಸೇರಿ ರಾಜ್ಯದಲ್ಲಿ 1,456 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,94,627ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,94,627ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40090 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,26,385ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,45,647ಕ್ಕೆ ಏರಿಕೆಯಾಗಿದೆ. ಇನ್ನು 8848 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!