ಕೊಪ್ಪಳ್ಳ: ಲಾರಿ ಡಿಕ್ಕಿಯಾಗಿ ಸ್ಕಾರ್ಪಿಯೋ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಾನಪುರ ಗ್ರಾಮದ ಬಳಿ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಮೃತರನ್ನು ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62) ಗಿರಿಜಮ್ಮ (45) ಶಾಂತಮ್ಮ (35) ಪಾರ್ವತಮ್ಮ (32) ಕಸ್ತೂರಮ್ಮ (20) ಎಂದು ಗುರುತಿಸಲಾಗಿದೆ.
ಕೊಪ್ಪಳದಲ್ಲಿ ನಡೆದ ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಕುನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.