ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 813 ಸೇರಿ ರಾಜ್ಯದಲ್ಲಿ 939 ಮಂದಿಗೆ ಪಾಸಿಟಿವ್; ಒಬ್ಬರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 939 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,96,717ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40091ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 813 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,28,118ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,47,688ಕ್ಕೆ ಏರಿಕೆಯಾಗಿದೆ. ಇನ್ನು 8896 ಸಕ್ರಿಯ ಪ್ರಕರಣಗಳಿವೆ.

SCROLL FOR NEXT