ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ: ಕಲುಷಿತ ನೀರು ಕುಡಿದ ನಂತರ ಬಾಲಕಿ ಸಾವು, 20 ಮಂದಿ ಅಸ್ವಸ್ಥ

ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ  ದೌಡಾಯಿಸಿ, ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಕುಲಷಿತ ನೀರು ಕುಡಿದ ನಂತರ ಕೆಲವು ಜನರು ಬೇಧಿ, ವಾಂತಿ ಮತ್ತಿತರ ಲಕ್ಷಣಗಳ ಬಗ್ಗೆ ದೂರು ನೀಡಿದ ಬಳಿಕ ಎರಡು ದಿನಗಳ ನಂತರ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.  ಕಂಪ್ಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ  ಸುಕನ್ಯಾ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಆರೋಗ್ಯಾಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ. ನರಿಹಾಲ ಹೊಳೆ ನೀರು, ಆಹಾರದ ನೀರಿನೊಂದಿಗೆ ಬೆರೆತು ನೀರು ಕಲುಷಿತವಾಗಿರುವುದಾಗಿ ಗೋನಾಳ್ ಗ್ರಾಮಸ್ಥರು ಆರೋಪಿಸಿದ್ದಾರೆ.  

ನೀರು ಕಲುಷಿತವಾಗಿರುವಂತೆ ಕಾಣುತ್ತಿದೆ. ಆದರೆ, ಪ್ರಯೋಗಾಲಯದ ಫಲಿತಾಂಶ ಬಂದ ಬಳಿಕವೇ ಅದು ದೃಢವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಎಲ್. ಜನಾರ್ಧನಾ ಹೇಳಿದ್ದಾರೆ. ಕಲುಷಿತ ನೀರಿನಿಂದ ಅಸ್ವಸ್ಥರಾದ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ

"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ

'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!

'ಯುಎಸ್ಎ ಇದನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ!': ಫ್ರಾನ್ಸ್ ವಿರುದ್ಧ ಟ್ರಂಪ್ ಆಕ್ರೋಶ

ಸಾಕಪ್ಪಾ ಸಾಕು ಯುದ್ಧ, ನಾವ್ ಯಾರಿಗೂ ಸಹಾಯ ಮಾಡಲ್ಲ; ನಿಮ್ ತೈಲ ನೀವೆ ಹುಡುಕಿಕೊಳ್ಳಿ: ಇತರ ರಾಷ್ಟ್ರಗಳಿಗೆ Trump ಶಾಕ್!

SCROLL FOR NEXT