ಕೋವಿಡ್-19 ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,176 ಸೇರಿ ರಾಜ್ಯದಲ್ಲಿ 1,624 ಮಂದಿಗೆ ಪಾಸಿಟಿವ್; ಇಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,094ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,176 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,30,482ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,50,794ಕ್ಕೆ ಏರಿಕೆಯಾಗಿದೆ. ಇನ್ನು 8,836 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!