ರಾಜ್ಯ

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ; 5 ಶಂಕಿತರ ಬಂಧನ

Srinivas Rao BV

ಮಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿವೆ. ಮರಣೋತ್ತರ ಪರೀಕ್ಷೆ ಕೈಗೊಂಡಿದ್ದು, ಕುಟುಂಬಸ್ಥರು ನೆಟ್ಟಾರುವಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ ಮತ್ತು ಮಡಿಕೇರಿ ಮತ್ತು ಕರ್ನಾಟಕದ ಹಾಸನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಶ್ರೀ ಪ್ರವೀಣ್ ನೆಟ್ಟಾರು ಅವರ ಮೇಲಿನ ಹತ್ಯೆ ನಿಜಕ್ಕೂ ಖೇದಕರ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಈ ದುಷ್ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಮುಲಾಜಿಲ್ಲದೆ ನಮ್ಮ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇನ್ನು ಪ್ರವೀಣ್ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರಿನತ್ತ ಕೊಂಡೊಯ್ಯಲಾಗುತ್ತಿದೆ.

SCROLL FOR NEXT