ಬಿಜೆಪಿ ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆ 

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. 

ಬೆಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. 

ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜೀನಾಮೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ಬಿಜೆಪಿಯ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂಥಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡಾ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರ್ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಹಿಂದೆಲ್ಲಾ ನಡೆದ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚ ಅಧ್ಯಕ್ಷ ಹುದ್ದೆಯಾದಿಯಾಗಿ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಎಲ್ಲರೂ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ರಾಜರಾಜೇಶ್ವರಿ ನಗರ ಮಂಡಲದ ಸಾಮಾಜಿಕ ಜಾಲತಾಣದ ಸಂಚಾಲಕನ ಹುದ್ದೆಗೆ ಶ್ರೀನಿವಾಸ್ ಗೌಡ ಅವರು ರಾಜೀನಾಮೆ ನೀಡಿದ್ದರೆ, ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಅವರೂ ರಾಜೀನಾಮೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT