ರಾಜ್ಯ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ ಐಎಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ

Lingaraj Badiger

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌, ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಆರ್ಗನೈಸಡ್ ಕ್ರೈಂ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಾಗಿ ನಡೆಯುತ್ತಿದೆ ಎಂದರು.

ಈ ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಲೆಟರ್ ಬರೆಯೋದಕ್ಕೆ ಹೇಳಿದ್ದೇನೆ. ಪ್ರಕರಣವನ್ನ ಎನ್ ಐಎ ಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.

ಕೇರಳ ಬಾರ್ಡರ್ ನಲ್ಲಿ ಸಿಸಿಟಿವಿ ಅಳವಡಿಸಿ, ಚೆಕ್ ಪೋಸ್ಟ್ ಹಾಕಿ ಸರ್ವೈಲನ್ಸ್ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸ್ ಕ್ಯಾಂಪ್ ಮಾಡಲು ತಿಳಿಸಲಾಗಿದೆ. ಕೆ ಎಸ್ ಆರ್ ಪಿ ಬೆಟಾಲಿಯನ್( ತುಕಡಿ) ದಕ್ಷಿಣ ಕನ್ನಡದಲ್ಲಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ರಾತ್ರಿ ಹೊತ್ತು ಹೆಚ್ಚು ದಸ್ತು ತಿರುಗಲು ಪೋಲಿಸರಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

SCROLL FOR NEXT