ಮಲೆ ಮಾದೇಶ್ವರ ದೇವಾಲಯ 
ರಾಜ್ಯ

ಉಘೇ ಮಾದೇಶ್ವರ: ಸಿಬ್ಬಂದಿ ಎಡವಟ್ಟಿನಿಂದ ಭಕ್ತನ ಬಾಯಿಗೆ ಬಂದು ಬಿತ್ತು 'ಲಡ್ಡು'; ಪ್ರಸಾದದ ಜೊತೆಗೆ ಕೈ ಸೇರಿತು ಎರಡು ಲಕ್ಷ ರು. ದುಡ್ಡು!

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಗುರುವಾರ ಭೀಮನ ಅಮಾವಾಸ್ಯೆ ಆಗಿದ್ದರಿಂದ ಲಕ್ಷಾಂತರ ಭಕ್ತರು ಮಾದಪ್ಪನ ದರ್ಶನಕ್ಕೆ ಬಂದಿದ್ದರು. ಈ ವೇಳೆ ವಿಶೇಷ ದರ್ಶನ ಮುಗಿಸಿ ಸೇವಾ ಕೌಂಟರ್‌ಗೆ ಬಂದ ಭಕ್ತನಿಗೆ ಇಲ್ಲಿನ ಸಿಬ್ಬಂದಿ ಆಚಾತುರ್ಯವಾಗಿ ಲಾಡು ಪ್ರಸಾದದ ಜೊತೆ 2 ಲಕ್ಷ ಹಣವಿದ್ದ ಬ್ಯಾಗ್ ನೀಡಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆಗೆ 2 ಲಕ್ಷ ರೂಪಾಯಿ ಭಕ್ತನ ಪಾಲಾಗಿದೆ. ವಿಶೇಷ ದರ್ಶನಕ್ಕೆ ಟಿಕೆಟ್ ನೀಡಲು ಕುಳಿತಿದ್ದ ಸಿಬ್ಬಂದಿ ಭಕ್ತನಿಗೆ ಲಾಡು ಜೊತೆಗೆ ಹಣದ ಚೀಲ ನೀಡಿದ್ದಾರೆ. ಲಾಡು ಪ್ರಸಾದ ಇಟ್ಟಿದ್ದ ಬ್ಯಾಗ್ ಸಮೀಪ ಹಣವನ್ನು ಸಹ ಇಡಲಾಗಿದ್ದ ಹಿನ್ನೆಲೆ ಹಣ ಸಹಿತ ಬ್ಯಾಗ್ ಅನ್ನು ಸಿಬ್ಬಂದಿ ಭಕ್ತನಿಗೆ ನಿಡಿದ್ದಾರೆ.

ಈ ಬ್ಯಾಗನ್ನು ತೆಗೆದುಕೊಂಡ ಭಕ್ತ ನಾಲ್ಕೈದು ಹೆಜ್ಜೆ ಮುಂದೆ ಹೋಗಿ ಬ್ಯಾಗ್ ಒಳಗೆ ನೋಡಿದ್ದಾನೆ. ಅದರಲ್ಲಿ ಹಣವಿರುವುದನ್ನೂ ನೋಡಿದ್ರೂ ಅದನ್ನು ವಾಪಸ್ ಕೊಡದೇ ಹಾಗೇಯೇ ಹೋಗಿದ್ದಾನೆ. ಹಣವಿದ್ದ ಬ್ಯಾಗ್‌ ಅನ್ನು ಭಕ್ತ ಗಮನಿಸಿದರೂ ಕೂಡ ಹಣ ಹಿಂದುರುಗಿಸದೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ.  ಈ ದೃಶ್ಯಾವಳಿ ಸಂಪೂರ್ಣವಾಗಿ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಭಕ್ತನ ವಿರುದ್ಧ ಮಲೆಮಹದೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT