ರಾಜ್ಯ

ಮಂಗಳೂರಿನಲ್ಲಿ ಧಾರಾಕಾರ ಮಳೆ; ಸಾಮಾನ್ಯ ಜನಜೀವನ ಅಸ್ತವ್ಯಸ್ತ

Sumana Upadhyaya

ಮಂಗಳೂರು: ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿದ್ದು, ಮಂಗಳೂರು (Mangaluru rain) ನಗರದಾದ್ಯಂತ ಭಾರೀ ಮಳೆಯಾಗುತ್ತಿದೆ. ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.

ಇಂದು ಬೆಳಗಿನ ಜಾವ 5 ಗಂಟೆಯಿಂದ ಮಂಗಳೂರಿನಲ್ಲಿ ಸತತವಾಗಿ ಭಾರೀ ಮಳೆ ಸುರಿಯುತ್ತಿದ್ದು 6.30ರ ವೇಳೆಗೆ ಪಾಂಡೇಶ್ವರ- ಶಿವನಗರ, ಬಿಜೈ, ಸುಭಾಷ್‌ನಗರ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡವು. ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ, ಉಳ್ಳಾಲ, ಮುಲ್ಕಿ ಮತ್ತು ಮೂಡುಬಿದಿರೆ ವ್ಯಾಪ್ತಿಯ ಮಂಗಳೂರು ಕಂದಾಯ ಉಪ ವಿಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದ.ಕ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ರಜೆ ಘೋಷಿಸಿದ್ದಾರೆ. ಪುತ್ತೂರಿನಲ್ಲಿ ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಶಾಲೆ-ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ತಿಳಿಸಲಾಗಿದೆ. 

ಶಿವನಗರದ ಅನೇಕ ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಜನರು ತಮ್ಮ ಮನೆಗಳಿಂದ ಹೊರಬರಲು ಹರಸಾಹಸ ಪಡುತ್ತಿದ್ದಾರೆ. ಪಂಪ್‌ವೆಲ್ ಸರ್ಕಲ್, ಕೊಟ್ಟಾರ ಜಂಕ್ಷನ್, ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಜಾಗ ನೀರು ತುಂಬಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 

SCROLL FOR NEXT