ವಂದಿತಾ ಶರ್ಮಾ 
ರಾಜ್ಯ

ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲು ರಾಜ್ಯ ಸರ್ಕಾರಿ ನೌಕರರಿಗೆ ಸೂಚನೆ

ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ಬೆಂಗಳೂರು: ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.

ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.

ರಾಜ್ಯದಲ್ಲಿ ಒಂದು ಕೋಟಿ ಧ್ವಜಾರೋಹಣ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜನರು ಧ್ವಜವನ್ನು ಹಾರಿಸಬಹುದು, ಸೆಲ್ಫಿ ತೆಗೆದುಕೊಳ್ಳಬಹುದು ಮತ್ತು ಅದನ್ನು https://harghartirang.com ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT