ವ್ರಜೇಶ್, ವ್ರಿಷಣ್ 
ರಾಜ್ಯ

ಉಡುಪಿ: ಸಿಇಟಿ ರ‍್ಯಾಂಕ್ ವಿಜೇತ ಅವಳಿ ಸಹೋದರರು, ನೀಟ್ ನತ್ತ ಚಿತ್ತ!

ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಉಡುಪಿ: ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. 

ಇವರಿಬ್ಬರೂ ಎಂಬಿಬಿಎಸ್ ಮಾಡಲು ನೀಟ್ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅವಳಿ ಸಹೋದರ ಪೈಕಿ ವ್ರಜೇಶ್ ಹಿರಿಯವರಾಗಿದ್ದು, ವ್ರಿಷಣ್ ಕಿರಿಯರಾಗಿದ್ದಾರೆ. ಇವರಿಬ್ಬರೂ ಎಂಬಿಬಿಎಸ್ ಮಾಡಲು ನೀಟ್ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಮುಂದೆ ಡಾಕ್ಟರ್ ಆಗುವ ಕನಸು ಕಾಣುತ್ತಿರುವುದಾಗಿ ತಿಳಿಸಿದ್ದಾರೆ.

ವ್ರಜೇಶ್ ದ್ವಿತೀಯ ಪಿಯುಸಿಯಲ್ಲಿ (ಸಿಬಿಎಸ್ ಸಿ) ಶೇ. 99 ರಷ್ಟು ಅಂಕ ಗಳಿಸಿದರೆ, ವ್ರಿಷಣ್ ಶೇ. 98.4 ರಷ್ಟು ಅಂಕ ಪಡೆದಿದ್ದಾರೆ. ಈ ಅವಳಿ ಸಹೋದರರ ತಂದೆ ವೀಣಾಧರ್ ಶೆಟ್ಟಿ ಹಣಕಾಸು ವಿಷಯದಲ್ಲಿ ಎಂಬಿಎ ಪೂರ್ಣಗೊಳಿಸಿದ್ದು, ಷೇರು ಮಾರುಕಟ್ಟೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ರೇಖಾ ವೀಣಾಧರ್ ಶೆಟ್ಟಿ ಎಂ.ಟೆಕ್ ವ್ಯಾಸಂಗ ಮಾಡಿದ್ದು, ಇದೀಗ ಗೃಹಿಣಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!