ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 1,154 ಸೇರಿ ಇಂದು 1,692 ಕೊರೋನಾ ಪ್ರಕರಣ ಪತ್ತೆ, ಇಬ್ಬರ ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,07,363ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,104ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,36,068ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,094 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,56,112ಕ್ಕೆ ಏರಿಕೆಯಾಗಿದೆ. ಇನ್ನು 11,105 ಸಕ್ರಿಯ ಪ್ರಕರಣಗಳಿವೆ.

SCROLL FOR NEXT