ಸಾಂದರ್ಭಿಕ ಚಿತ್ರ 
ರಾಜ್ಯ

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ

ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಮಡಿಕೇರಿ: ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಕೊಡಗು ಪಶುವೈದ್ಯಕೀಯ ಇಲಾಖೆಯು ಅಂತರರಾಜ್ಯ ಹಂದಿಮಾಂಸ ಮಾರಾಟ ಮತ್ತು ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೇರಳದಲ್ಲಿ ದೇಶೀಯ ಹಂದಿಗಳ ದೊಡ್ಡ ಜನಸಂಖ್ಯೆಯು ಎಎಸ್ಎಫ್ ಸೋಂಕಿಗೆ ಒಳಗಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಂತಾರಾಜ್ಯ ಹಂದಿಗಳ ಸಾಗಣೆಯನ್ನು ನಿಷೇಧಿಸಿ ಜಿಲ್ಲಾ ಪಶು ವೈದ್ಯಕೀಯ ಇಲಾಖೆ ಅಧಿಸೂಚನೆ ಹೊರಡಿಸಿದೆ.

“ಕೊಡಗು ಸಾಮಾನ್ಯವಾಗಿ ನೆರೆಯ ಕೇರಳ ರಾಜ್ಯಕ್ಕೆ ಹಂದಿ ಮಾಂಸವನ್ನು ಪೂರೈಸುತ್ತದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಮಾಂಸ ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಚೆಕ್‌ಪೋಸ್ಟ್‌ಗಳಿಗೆ ಇಲಾಖೆಯ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಅವರು ಎಎಸ್‌ಎಫ್ ಹರಡುವುದನ್ನು ತಡೆಯಲು ನಿಗಾ ವಹಿಸುತ್ತಾರೆ ಎಂದು ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಡಿಡಿ ಡಾ.ಸುರೇಶ್ ಭಟ್ ತಿಳಿಸಿದ್ದಾರೆ.

ಯಾವುದೇ ಹಂದಿಗಳು ವೈರಸ್ ಸೋಂಕಿಗೆ ಒಳಗಾಗಿದ್ದರೆ ಇಲಾಖೆಗೆ ತಕ್ಷಣ ವರದಿ ಮಾಡುವಂತೆ ಜಿಲ್ಲೆಯ ಹಂದಿ ಸಾಕಾಣಿಕೆದಾರರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಎಎಫ್‌ಎಸ್ ಹಂದಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ ಮತ್ತು ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಡಾ.ಸುರೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ