ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಸಚಿವಾಲಯದ ಟ್ವೀಟ್ ಮಾಡಿದೆ.

ಬೆಂಗಳೂರಿನಲ್ಲಿ ಇಂದು 545 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,791,311ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿ ಇಂದು352 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,912,376ಕ್ಕೆ ಏರಿಕೆಯಾಗಿದೆ. ಇನ್ನು 3,387 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್