ಹಂಪಿ ಕಲ್ಲಿನ ರಥ (ಸಂಗ್ರಹ ಚಿತ್ರ) 
ರಾಜ್ಯ

ಪ್ರವಾಸೋದ್ಯಮಕ್ಕೆ ಹಿನ್ನಡೆ: ಹಂಪಿ ಸ್ಮಾರಕಗಳ ಸುತ್ತಮುತ್ತ ಕುಡಿಯುವ ನೀರಿಗೆ ಕೊರತೆ; ಆಡಳಿತಕ್ಕೆ ಪ್ರವಾಸಿಗರ ಹಿಡಿಶಾಪ!

ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಹೊಸಪೇಟೆ: ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ವಿಶ್ವ ವಿಖ್ಯಾತವಾಗಿರುವ ಹಂಪಿಯಲ್ಲಿ ಉತ್ತಮ ಶೌಚಾಲಯ, ಘನತ್ಯಾಜ್ಯ ನಿರ್ವಹಣೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಅಧಿಕಾರಿಗಳಿಗೆ ಸದಾ ಸವಾಲಾಗಿದೆ. ಈಗ ಇರುವ ಆರ್‌ಒ ಪ್ಲಾಂಟ್‌ಗಳು ಸಹ ನಿಷ್ಪ್ರಯೋಜಕವಾಗಿ ಪ್ರವಾಸಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿವೆ.

ಕಳೆದ ಕೆಲವು ವಾರಗಳಿಂದ, ವಿದೇಶಿ ಪ್ರವಾಸಿಗರು ಹಂಪಿಗೆ ಉತ್ತಮ ಸಂಖ್ಯೆಯಲ್ಲಿ ಭೇಟಿ ನೀಡಲು ಪ್ರಾರಂಭಿಸಿದ್ದಾರೆ ಮತ್ತು ಬೇಸಿಗೆಯ ತಿಂಗಳುಗಳಲ್ಲಿ ದೇಶೀಯ ಪ್ರವಾಸಿಗರ ಸಂಖ್ಯೆಯೂ ಉತ್ತಮವಾಗಿದೆ. ಹಂಪಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಆರ್‌ಒ  ಪ್ಲಾಂಟ್‌ಗಳು ತಾಂತ್ರಿಕ ಕಾರಣದಿಂದ ನೀರು ಸರಬರಾಜು ಸ್ಥಗಿತಗೊಳಿಸಿವೆ, ಇದರಿಂದ ಪ್ರವಾಸಿಗರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಬಗ್ಗೆ ಹಂಪಿಯ ಹಿರಿಯ ಪ್ರವಾಸಿ ಮಾರ್ಗದರ್ಶಕ ಪ್ರಭು ಪಾಟೀಲ್ ಮಾತನಾಡಿ, ಬೇಸಿಗೆಯಲ್ಲಿ ಹಂಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ ಮತ್ತು ಅದೇ ತಿಂಗಳುಗಳಲ್ಲಿ ನೀರಿನ ಸಮಸ್ಯೆಗಳು ವರದಿಯಾಗುತ್ತವೆ. ವಿಜಯ ವಿಠ್ಠಲ ದೇವಸ್ಥಾನದ ಬಳಿ ಎರಡು ಆರ್‌ಒ  ಪ್ಲಾಂಟ್‌ಗಳು ಮತ್ತು ಲೋಟಸ್ ಮಹಲ್ ಬಳಿಯ ಇನ್ನೊಂದು ಪ್ಲಾಂಟ್ ಕಳೆದ ಕೆಲವು ತಿಂಗಳಿಂದ ಕಾರ್ಯಸ್ಥಗಿತವಾಗಿದೆ, ಇದನ್ನು ಸರಿಪಡಿಸಲು ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಹಲವಾರು ಪ್ರವಾಸಿಗರು ದೂರಿದರು ಮತ್ತು ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸುವಂತೆ  ಅಧಿಕಾರಿಗಳಿಗೆ ಒತ್ತಾಯಿಸಿದರು.

"ಈ ಬೇಸಿಗೆಯಲ್ಲಿ ಹಂಪಿಯಲ್ಲಿ ತಾಪಮಾನವು 40 ಡಿಗ್ರಿಗಳಷ್ಟು ಹೆಚ್ಚಾಗಿದೆ ಮತ್ತು ಹೆಚ್ಚಿನ ಪ್ರವಾಸಿಗರು ಬಾಟಲಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಪ್ರತಿದಿನ 2,000 ಜನರು ಹಂಪಿ ಸ್ಮಾರಕಗಳಿಗೆ ಭೇಟಿ ನೀಡುತ್ತಾರೆ ಮತ್ತು ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ಖಚಿತಪಡಿಸುವುದು  ಅಧಿಕಾರಿಗಳ ಕೆಲಸವಾಗಿದೆ" ಎಂದು ಅವರು ಹೇಳಿದರು. 

ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ (ಎಚ್‌ಡಬ್ಲ್ಯೂಎಚ್‌ಎಎಂಎ) ಹಿರಿಯ ಅಧಿಕಾರಿಯೊಬ್ಬರು ಈ ಕುರಿತು ಮಾತನಾಡಿ ಆರ್‌ಒ ಪ್ಲಾಂಟ್ ನಿರ್ವಹಣೆಗೆ ನೋಟಿಸ್ ನೀಡಲಾಗಿದೆ. ನಾವು ನಿರ್ದಿಷ್ಟ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಮತ್ತು ಪ್ರವಾಸಿಗರಿಗೆ  ನೀರು ಸರಬರಾಜು ಕೇಂದ್ರಗಳನ್ನು ಹೆಚ್ಚಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ" ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್