ನಟಿ ಅನುಷ್ಕಾ ಶೆಟ್ಟಿ, ಗುಣರಂಜನ್ ಶೆಟ್ಟಿ 
ರಾಜ್ಯ

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು, ಗೃಹ ಸಚಿವರಿಗೆ ದೂರು

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಇನ್ನೊಂದೆಡೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ನಡುವೆ ಗಲಾಟೆಯಾಗಿದೆ ಎನ್ನಲಾಗುತ್ತಿದೆ.

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚಿನ ವದಂತಿ ಬೆನ್ನಲ್ಲೇ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನು ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದಾರೆ. ಇದೇ ವಿಚಾರಕ್ಕೆ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮುತ್ತಪ್ಪ ರೈ ಬದುಕಿದ್ದಾಗ ಅನ್ಯೋನ್ಯವಾಗಿದ್ದ ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ರೈ ಸಾವಿನ ನಂತರ ದೂರವಾಗಿದ್ದರು. ಗುಣರಂಜನ್ ಶೆಟ್ಟಿ ಜಯ ಕರ್ನಾಟಕ ಸಂಘಟನೆಯಿಂದ ಹೊರಬಂದು ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದ್ದರು. ಅಲ್ಲದೇ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇದೇ ಕಾರಣಕ್ಕೆ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ಆದರೆ, ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ಮನ್ಮಿತ್ ರೈ, ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಹೇಳಿಕೆಗಳನ್ನು ಪೊಲೀಸರು ಗಮನಿಸುತ್ತಿದ್ದು, ತನಿಖೆಯಿಂದ ಮಾತ್ರ ಸತ್ಯಾಂಶ ತಿಳಿದುಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT