ಸಂಗ್ರಹ ಚಿತ್ರ 
ರಾಜ್ಯ

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ

ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಅಪಘಾತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂ ಗೊಂಡಿದ್ದು, ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಆಟೋ ಚಾಲಕನ ಕಾಲುಗಳು ಕಟ್ ಆಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.

ಘಟನೆಯಿಂದಾಗಿ ಮೈಸೂರು ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಕೆಲಸ ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ