ಸಚಿವ ಕೆ ಸುಧಾಕರ್ 
ರಾಜ್ಯ

ಕೊರೋನಾ, ಡೆಂಗ್ಯೂ ಹೆಚ್ಚಳದ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಡಾ. ಸುಧಾಕರ್

ಕೋವಿಡ್‌ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ.

ಬೆಂಗಳೂರು: ಕೋವಿಡ್‌ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.

ಇಲಾಖೆಯು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದರು.

ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಘೀ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT