ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗ ಮ್ಯಾಟ್ ಖರೀದಿಸುತ್ತಿರುವ ಜನತೆ. 
ರಾಜ್ಯ

ವಿಶ್ವ ಯೋಗ ದಿನಾಚರಣೆ: ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 'ಯೋಗ ಮ್ಯಾಟ್' ಬೆಲೆ ಏರಿಕೆ!

ಕಳೆದೆರಡು ತಿಂಗಳಿಂದ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆಯಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೀವ್ರ ಟೀಕೆಗೆ ಗುರಿಯಾಗುತ್ತಿದ್ದು, ಇದರ ಬೆನ್ನಲ್ಲೇ ಬೆಲೆ ಏರಿಕೆ ಪಟ್ಟಿಗೆ ಹೊಸದಾಗಿ ಯೋಗ ಮ್ಯಾಟ್ ಸೇರ್ಪಡೆಗೊಂಡಿದೆ.

ಮೈಸೂರು: ಕಳೆದೆರಡು ತಿಂಗಳಿಂದ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆಯಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೀವ್ರ ಟೀಕೆಗೆ ಗುರಿಯಾಗುತ್ತಿದ್ದು, ಇದರ ಬೆನ್ನಲ್ಲೇ ಬೆಲೆ ಏರಿಕೆ ಪಟ್ಟಿಗೆ ಹೊಸದಾಗಿ ಯೋಗ ಮ್ಯಾಟ್ ಸೇರ್ಪಡೆಗೊಂಡಿದೆ.

ಜೂನ್.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಂಸ್ಕೃತಿ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೋದಿ ಭೇಟಿ ಬೆನ್ನಲ್ಲೇ ನಗರದಲ್ಲಿ ಯೋಗ ಮ್ಯಾಟ್ ಗಳ ಬೆಲೆ ಗಗನಕ್ಕೇರಿದೆ.

ಪ್ರಧಾನಿ ಮೋದಿ ಮೈಸೂರು ಭೇಟಿಗೆ ಕೇವಲ ಒಂದು ವಾರ ಬಾಕಿ ಇದ್ದು, ಯೋಗ ದಿನಾಚರಣೆ ಆಚರಿಸಲು ಅರಮನೆ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಜೂನ್ 21 ರಂದು ನಡೆಯುವ ಈ ಕಾರ್ಯಕ್ರಮದ ನೇತೃತ್ವ ವಹಿಸಲಿರುವ ಮೋದಿ ಅವರೊಂದಿಗೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಯೋಗಾಸಕ್ತರು ಸೇರಿದಂತೆ ಎಲ್ಲಾ ವರ್ಗದ ಜನರು ಮೈಸೂರು ಅರಮನೆ ಆವರಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭ್ಯಾಸ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 15,000 ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಯೋಗ ಮ್ಯಾಟ್ ಕಡ್ಡಾಯವಾಗಿದೆ. ಹೀಗಾಗಿ ಯೋಗ ಮ್ಯಾಟ್'ಗಳಿಗೆ ಬೇಡಿಕೆಗಳು ಹೆಚ್ಚಾಗಿವೆ.

ಉತ್ತಮ ಗುಣಮಟ್ಟದ ಯೋಗ ಮ್ಯಾಟ್‌ಗಳ ದರ ಎರಡು ತಿಂಗಳ ಹಿಂದೆ 180 ರಿಂದ 250 ರೂ.ವರೆಗೆ ಇತ್ತು. ಆದರೆ, ಇವುಗಳ ಬೆಲೆಯನ್ನು ರೂ.400-520ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಯೋಗ ಮ್ಯಾಟ್ ಗಳಿಗೆ ಬೇಡಿಕೆ ಹೆಚ್ಚಾಗುವುದನ್ನು ತಿಳಿದ ಶಿವರಾಮ್ ಪೇಟೆ ಹಾಗೂ ಇತರೆ ಸ್ಟೇಷನರಿ ಅಂಗಡಿಗಳ ಮಾಲೀಕರು ಇವುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ.

ಮೋದಿಯವರ ಆಗಮನ ಹಿನ್ನೆಲೆಯಲ್ಲಿ ಯೋಗ ಮ್ಯಾಟ್ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ಆದರೆ, ಯೋಗ ದಿನ ಪೂರ್ಣಗೊಂಡ ಬಳಿಕ ಎಷ್ಟು ಬೇಗ ದರ ಏರಿಕೆಯಾಗಿತ್ತೋ, ಅಷ್ಟೇ ಬೇಗ ಇಳಿಕೆಯೂ ಆಗಲಿದೆ ಎಂದು ಮನ್ನಾರ್ ಮಾರುಕಟ್ಟೆಯ ಸಗಟು ವ್ಯಾಪಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT