ರಾಜ್ಯ

ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 582 ಸೇರಿ ರಾಜ್ಯದಲ್ಲಿ 594 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

Srinivas Rao BV

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,957,343ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ. 

ಬೆಂಗಳೂರಿನಲ್ಲಿ ಇಂದು 582 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,792,722ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿ ಇಂದು 400 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,913,353ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3882 ಕ್ಕೆ ಏರಿಕೆಯಾಗಿದೆ.

SCROLL FOR NEXT