ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್ 
ರಾಜ್ಯ

ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್

ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ.

ಬೆಂಗಳೂರು: ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ.

ಇಸ್ಕಾನ್‌ನ ನೂತನ ರಾಜಾಧಿರಾಜ ಗೋವಿಂದ ದೇವಾಲಯ ಹಾಗೂ ಸಾಂಸ್ಕೃತಿಕ ಸಂಕೀರ್ಣ ಕಟ್ಟಡವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಉದ್ಘಾಟಿಸಿದರು. ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದ್ದು, ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ಈ ವೇಳೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಜೊತೆಗಿದ್ದರು.

ದೇವರ ದರ್ಶನ ನಂತರ, ದೇವಾಲಯ ಆವರಣದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ‌ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ' ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಮಾಹಿತಿ ನೀಡಿದ್ದಾರೆ.

'ದೇಶದ ವಿವಿಧ ಭಾಗಗಳ ಭಕ್ತರ ಭಕ್ತಿಯ ಕ್ಷೇತ್ರ ಇದಾಗಲಿದೆ. ನಿತ್ಯವೂ ಉಚಿತ ಊಟದ ವ್ಯವಸ್ಥೆ ಇರಲಿದೆ' ಎಂದೂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!