ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹೊಸಪೇಟೆ: ಕೆಎಸ್ಆರ್'ಟಿಸಿ ಬಸ್​-ಲಾರಿ ಮುಖಾಮುಖಿ ಡಿಕ್ಕಿ; 25 ಜನರಿಗೆ ಗಾಯ

ಕೆಎಸ್ಆರ್'ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಕೆಎಸ್ಆರ್'ಟಿಸಿ ಬಸ್​-ಲಾರಿ ನಡುವೆ ಡಿಕ್ಕಿ ಸಂಭವಿಸಿರುವುದು.
Manjula VN
Updated On : 16 Jun 2022, 2:04 pm

ವಿಜಯನಗರ: ಕೆಎಸ್ಆರ್'ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಹೊಸಪೇಟೆಯಿಂದ ಬಳ್ಳಾರಿ ಕಡೆ ಹೊರಟ್ಟಿದ್ದ ಸರ್ಕಾರಿ ಬಸ್ಸಿಗೆ ಲಾರಿ ಡಿಕ್ಕಿ ಹೊಡಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ

Advertisement

Advertisement

ಗಾಯಗೊಂಡ ಪ್ರಯಾಣಿಕರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರು ಎಂದು ವರದಿಗಳು ತಿಳಿಸಿವೆ. ಅಪಘಾತ ಬೆನ್ನಲ್ಲೇ ಸ್ಥಳೀಯರು ಪ್ರಯಾಣಿಕರ ನೆರವಿಗೆ ಧಾವಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಲಾರಿ ಚಾಲಕ‌ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement