ರಾಜ್ಯ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ಇಂದು ಬೆಂಗಳೂರಿನಲ್ಲಿ 791 ಸೇರಿ 833 ಮಂದಿಗೆ ಪಾಸಿಟಿವ್; ಒಂದು ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,58,824ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಓರ್ವರು ಸಾವನ್ನಪ್ಪಿದ್ದು, ಹೀಗಾಗಿ ಸಾವಿನ ಸಂಖ್ಯೆ 40,068 ಇದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ. 

ಬೆಂಗಳೂರಿನಲ್ಲಿ ಇಂದು 791 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,94,128ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ.

ರಾಜ್ಯದಲ್ಲಿ ಇಂದು 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,14,343ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ಏರಿಕೆಯಾಗಿದೆ.

SCROLL FOR NEXT