ಹತ್ಯೆಯಾದ ಜೆಡಿಎಸ್ ನಾಯಕ 
ರಾಜ್ಯ

ಗುಬ್ಬಿ: ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಐವರು ವಶಕ್ಕೆ

ಗುಬ್ಬಿ ಪಟ್ಟಣದಲ್ಲಿ ಜೆಡಿಎಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅಲಿಯಾಸ್​ ಕುರಿ ಮೂರ್ತಿ ಅವರ ಕೊಲೆ ಪ್ರಕರಣ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ತುಮಕೂರು: ಗುಬ್ಬಿ ಪಟ್ಟಣದಲ್ಲಿ ಜೆಡಿಎಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅಲಿಯಾಸ್​ ಕುರಿ ಮೂರ್ತಿ ಅವರ ಕೊಲೆ ಪ್ರಕರಣ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಬುಧವಾರ ಮಧ್ಯಾಹ್ನ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ನರಸಿಂಹಮೂರ್ತಿ (50) ಕೊಲೆಯಾಗಿದ್ದರು. ಪ್ರತಿನಿತ್ಯ ಟೀ ಅಂಗಡಿ ಬಳಿ ಕುಳಿತು ದಲಿತರು, ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿದ್ದ ಜಿ.ಸಿ.ನರಸಿಂಹಮೂರ್ತಿ ಎಂದಿನಂತೆ ಟೀ ಅಂಗಡಿ ಮುಂದೆ ಕುಳಿತಿದ್ದಾಗ ಸ್ಥಳಕ್ಕೆ ಬಂದ ಐವರು ದುಷ್ಕಮಿರ್ಗಳ ತಂಡ ಏಕಾಏಕಿ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಪೊಲೀಸರು ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿ ಐವರನ್ನು ತಿಪಟೂರು ಬಳಿ ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ನರಸಿಂಹಮೂರ್ತಿ ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!