ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

ಆರೋಗ್ಯ ಆಯುಕ್ತ ಡಾ.ರಣದೀಪ್ ಮಾತನಾಡಿ, ಕೊರೊನಾ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಆದರೆ ಆಸ್ಪತ್ರೆಗೆ ದಾಖಲೆಯಾಗುವವರ ಸಂಖ್ಯೆ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ ಗಮನ ಹರಿಸುತ್ತಿದ್ದು, ಕೊರೊನಾ ಲಸಿಕಾಕರಣಕ್ಕೆ ಹೆಚ್ಚಿನ‌ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೊರೋನಾ ಶೀಘ್ರ ಪತ್ತೆಗೆ ಕೊರೋನಾ ಪರೀಕ್ಷೆ, ಐಸೋಲೇಶನ್ ಕಡೆಗೆ ಹೆಚ್ಚಿನ ಗಮನ ಹರಿಸಲಾಗುತ್ತದೆ. ಪ್ರಕರಣಗಳು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಹಾಗೂ ಹೊಸ ರೂಪಾಂತರಿ ತ್ವರಿತ ಪತ್ತೆ ಕಾಲ ಕಾಲಕ್ಕೆ ಜೀನೋಮ್ ಪರೀಕ್ಷೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಸ್ಕ್ರೀನಿಂಗ್, ಪಾಸಿಟಿವ್ ಬಂದ ವ್ಯಕ್ತಿಯ ಮಾದರಿಯನ್ನು ಕಡ್ಡಾಯವಾಗಿ ಜೀನೋಮ್ ಪರೀಕ್ಷೆ ಒಳಪಡಿಸುವುದು ಹಾಗೂ ಸೋಂಕಿತ ವ್ಯಕ್ತಿಗೆ ಕಡ್ಡಾಯ ಕ್ವಾರಂಟೈನ್ ಒಳಪಡಿಸುವಂತೆ ಪರಿಷ್ಕೃತ ಮಾರ್ಗ ಹೊರಡಿಸಲಾಗಿದೆ.

ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ಐಎಲ್ಐ ಹಾಗೂ ಸಾರಿ ಪ್ರಕರಣಗಳನ್ನು ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು. ಜತೆಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ಈ ವೇಳೆ ಸಿಟಿ ವ್ಯಾಲ್ಯೂವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ, ಜತೆಗೆ ಸಮುದಾಯದಲ್ಲಿ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್