ಸಂಗ್ರಹ ಚಿತ್ರ 
ರಾಜ್ಯ

ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ರಾಯಚೂರು: ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ವಾರ್ಡ್ ನಂಬರ್-14ರ ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ (48) ಮೃತ ದುರ್ದೈವಿಯಾಗಿದ್ದಾರೆ. ವಾಂತಿ ಭೇದಿ, ಕಿಡ್ನಿ ಸಮಸ್ಯೆಯಿಂದ ಮಹಿಳೆ ಮೇ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಇನ್ನೂ ನೂರಾರು ಮಂದಿ ನಿರ್ಜಲೀಕರಣದಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಪ್ರಕರಣದ ಸಂಬಂಧ ಪರಿಶೀಲನೆಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ ನೇತೃತ್ವದ ತನಿಖಾ ತಂಡ ನೇಮಿಸಲಾಗಿತ್ತು. ನೀರಿನ ಶುದ್ಧೀಕರಣ ಹಾಗೂ ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯವಾಗಿದೆ. ಈಗಾಗಲೇ ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಸಮಿತಿ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!