ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 610 ಸೇರಿ ರಾಜ್ಯದಲ್ಲಿ 634 ಮಂದಿಗೆ ಪಾಸಿಟಿವ್; ಇಬ್ಬರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 634 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,59,458ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು. ಇದರೊಂದಿಗೆ ಸಾವಿನ ಸಂಖ್ಯೆ 40070 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 610 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,94,738ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 503 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,14,846ಕ್ಕೆ ಏರಿಕೆಯಾಗಿದೆ. ಇನ್ನು 4500 ಸಕ್ರಿಯ ಪ್ರಕರಣಗಳಿವೆ.

SCROLL FOR NEXT