ಕೇಂದ್ರ ಸಚಿವ ಭಗವಂತ ಖೂಬಾ 
ರಾಜ್ಯ

ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!

ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಲಬುರಗಿ: ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದ ರೈತನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಸಚಿವರ ಜತೆ ದೂರವಾಣಿಯಲ್ಲಿ ಮಾತನಾಡಿರುವ ಕ್ಲಿಪ್ ಇದಾಗಿದೆ. ನಿನ್ನೆ ರಾತ್ರಿ ಉತ್ತಮ ಮಳೆಯಾಗಿದೆ, ಆದರೆ ಗ್ರಾಮಕ್ಕೆ ರಸಗೊಬ್ಬರ ಸಿಕ್ಕಿಲ್ಲ ಎಂದು ರೈತರು ಸಚಿವರಿಗೆ ಹೇಳುತ್ತಾರೆ.

ಇದಕ್ಕೆ ಸಚಿವರು, ಸ್ಥಳೀಯ ಸಮಸ್ಯೆಗಳಿಗೆ ಶಾಸಕರು, ಅಧಿಕಾರಿಗಳಿದ್ದಾರೆ, ರಾಜ್ಯಕ್ಕೆ ರಸಗೊಬ್ಬರ ನೀಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ಮಾಡಿರುವುದಾಗಿ ಉತ್ತರಿಸಿದ್ದಾರೆ. ಸುಮಾರು ನಾಲ್ಕು ನಿಮಿಷಗಳ ಕಾಲ ಮಾತುಕತೆ ಮುಂದುವರಿದಿದ್ದು, ಸಮಸ್ಯೆ ಬಗೆಹರಿಸುವಂತೆ ರೈತರು ಸಚಿವರನ್ನು ಒತ್ತಾಯಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತ ಸಚಿವರಿಗೆ ಹೇಳುತ್ತಿರುವುದು ಕೇಳಿಬಂದಿದೆ. ಇಂತಹ ಬೆದರಿಕೆಗಳಿಗೆ ಸಚಿವರು ಸಿದ್ಧ ಎಂಬ ಮಾತುಗಳೂ ಕೇಳಿಬಂದಿವೆ.

ಇದೇ ವೇಳೆ ಗುರುವಾರ ಸ್ಪಷ್ಟನೆ ನೀಡಿರುವ ಖೂಬಾ, ಜೂ.10ರಂದು ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದವರು ರೈತರಲ್ಲ, ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಆ ವ್ಯಕ್ತಿ ತನ್ನನ್ನು 3-4 ಬಾರಿ ದೂರವಾಣಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದ್ದರಿಂದ ಏನಾದರೂ ಏನಾದರೂ ಮಹತ್ವದ ಸಮಸ್ಯೆ ಇರಬಹುದೆಂದು ಭಾವಿಸಿ ಕರೆ ಮಾಡಿದ್ದೆ. ಆತ ಗೊಬ್ಬರದ ಬಗ್ಗೆ ಕೇಳುವ ನೆಪದಲ್ಲಿ ವ್ಯಕ್ತಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆಯೇ ಹೊರತು ನಾನಲ್ಲ ಎಂದು ಸಚಿವರು ಹೇಳಿದರು.

ಆಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ತನಗೆ ಮತ್ತು ತನ್ನ ಪಕ್ಷಕ್ಕೆ ಮಾನಹಾನಿ ಮಾಡಲು ಆಯ್ದ ಭಾಗವನ್ನು ವೈರಲ್ ಮಾಡಲಾಗಿದೆ ಎಂದು ಖೂಬಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT