ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾ ಅಬ್ಬರ: ಕ್ಲಸ್ಟರ್'ಗಳ ಸಂಖ್ಯೆ 18ಕ್ಕೆ ಹೆಚ್ಚಳ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಕ್ಲಸ್ಟರ್ ಗಳ ಸಂಖ್ಯೆ ಇದೀಗ 18ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಕ್ಲಸ್ಟರ್ ಗಳ ಸಂಖ್ಯೆ ಇದೀಗ 18ಕ್ಕೆ ಏರಿಕೆಯಾಗಿದೆ.

ದಾಸರಹಳ್ಳಿಯ ಎರಡು ಶಾಲೆಗಳನ್ನು ಹೊರತುಪಡಿಸಿ, ಮಹದೇವಪುರದಲ್ಲಿ 12 ಮತ್ತು ಯಲಹಂಕದಲ್ಲಿ ಎರಡು ಕ್ಲಸ್ಟರ್ ಗಳು ವರದಿಯಾಗಿದ್ದರೆ, ಉಳಿದ ಕ್ಲಸ್ಟರ್ ಗಳು ಅಪಾರ್ಟ್'ಮೆಂಟ್ ಹಾಗೂ ವಿಲ್ಲಾಗಳಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಮಹದೇವಪುರದ 11 ಕ್ಲಸ್ಟರ್‌ಗಳಲ್ಲಿ ಐದಕ್ಕಿಂತ ಕಡಿಮೆ ಪ್ರಕರಣಗಳು ಕಂಡು ಬಂದಿದ್ದು, ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಒಂದು ಕ್ಲಸ್ಟರ್ ಪತ್ತೆಯಾಗಿದೆ. ಇನ್ನು ದಾಸರಹಳ್ಳಿಯ ಒಂದು ಶಾಲೆಯಲ್ಲಿ ತಲಾ ಐದರಿಂದ 14 ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಶುಕ್ರವಾರ ರಾಜ್ಯದಲ್ಲಿ ಒಟ್ಟಾರೆ 634 ಸೋಕು ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಸಕ್ರಿಯಗಳ ಪ್ರಕರಣಗಳ ಪ್ರಮಾಣ ಶೇ.4.3ಕ್ಕೆ ತಲುಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT