ಎಂ.ರಘುಪತಿ 
ರಾಜ್ಯ

ಮಾಜಿ ಸಚಿವ, ಜನತಾ ಪರಿವಾರದ ಹಿರಿಯ ನಾಯಕ ಎಂ.ರಘುಪತಿ ನಿಧನ

ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು.

ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು.

ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ ಟಿ ರಾಮ ರಾವ್ ಗೆ ಆತ್ಮೀಯರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಎಂ.ರಘುಪತಿ ಅವರ ಪಾರ್ಥೀವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿ ಇರಿಸಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ (ಜೂ.19) ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ಇವರು ಮಲ್ಲೇಶ್ವರಂ ಶಾಸಕರಾಗಿ ಸೇವೆ ಸಲ್ಲಿಸಿದ್ದು, ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT