ರಾಜ್ಯ

ಜೂನ್ 20ಕ್ಕೆ ನಗರಕ್ಕೆ ಪ್ರಧಾನಿ ಮೋದಿ ಭೇಟಿ: ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

Manjula VN

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭದ್ರತಾ ಕ್ರಮಗಳನ್ನು ಶುಕ್ರವಾರ ಪರಿಶೀಲನೆ ನಡೆಸಿದರು.

ಪ್ರಧಾನಿ ಮೋದಿಯವರು ಭೇಟಿ ನೀಡಿರುವ ಪ್ರದೇಶಗಳು ಹಾಗೂ ಹೆಲಿಪ್ಯಾಡ್'ನ್ನು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಸಿ ಎಚ್ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು  ಪರಿಶೀಲಿಸಿದರು.

ವಿಜ್ಞಾನಿಗಳೊಂದಿಗೆ ಪ್ರಧಾನಿ ಮೋದಿಯವರು ಸಂವಾದ ನಡೆಸುವ ಹಿನ್ನೆಲೆಯಲ್ಲಿ ಅವರು ಭೇಟಿ ನೀಡುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಕ್ಯಾಂಪಸ್‌ನಲ್ಲಿರುವ ಸೆಂಟರ್ ಫಾರ್ ಬ್ರೈನ್ ರಿಸರ್ಚ್‌ಗೆ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸಚಿವರು ಚಂದ್ರಾ ಲೇಔಟ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಗೆ ಭೇಟಿ ನೀಡಿದರು. ಅಲ್ಲಿ ಪ್ರಧಾನಮಂತ್ರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಗೂ ತೆರಳಿದ ಜ್ಞಾನೇಂದ್ರ ಅವರು ಭದ್ರತಾ ವ್ಯವಸ್ಥೆಗಳ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

SCROLL FOR NEXT