ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಅಗ್ನಿಪಥ್​ ಯೋಜನೆ: ಪೊಲೀಸ್ ಇಲಾಖೆಯಲ್ಲಿಯೂ ಅಗ್ನಿವೀರರಿಗೆ ಮೀಸಲಾತಿ; ಗೃಹ ಸಚಿವ ಆರಗ ಜ್ಞಾನೇಂದ್ರ

ಕೇಂದ್ರದ ಅಗ್ನಿಪಥ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ನಡುವೆಯೇ, ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವ ನೀತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದ್ದಾರೆ. 

ಬೆಂಗಳೂರು: ಕೇಂದ್ರದ ಅಗ್ನಿಪಥ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ನಡುವೆಯೇ, ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವ ನೀತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿವೀರರಾಗಿ ನಾಲ್ಕು ವರ್ಷ ಸೇವೆ ಸಲ್ಲಿಸಿದ ಯುವಕರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಚಿಂತನೆ ನಡೆಸಿದ್ದೇವೆ. ಸೋಮವಾರ ಮತ್ತು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಂತರ ನೀತಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಪ್ರಸ್ತುತ ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳ ಇಲಾಖೆಗಳಲ್ಲಿ ಮಾಜಿ ಸೈನಿಕರಿಗೆ ಮೀಸಲಾತಿಯನ್ನು ನೀಡುತ್ತಿದ್ದೇವೆ. ಇದಲ್ಲದೆ, 26 ರಿಂದ 27 ವರ್ಷದೊಳಗಿನ ಯುವಕರು ಮಿಲಿಟರಿ ತರಬೇತಿಯನ್ನು ಪಡೆಯುವುದರಿಂದ ಹೆಚ್ಚಿನ ಮೀಸಲಾತಿ ನೀಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಯೋಜನೆಯು ಉತ್ತಮ ಯೋಜನೆ ಎಂದು ಬಣ್ಣಿಸಿದ ಸಚಿವರು, ಕೆಲವರು ಅದರ ವಿರುದ್ಧ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಯೋಜನೆ ಅರ್ಥಮಾಡಿಕೊಳ್ಳುವಲ್ಲಿ ಪ್ರತಿಭಟಿಸುತ್ತಿರುವವರು ವಿಫಲರಾಗಿದ್ದಾರೆ ಎಂದರು.

ಈ ಯೋಜನೆಯು ಯುವಕರಿಗೆ ಉದ್ಯೋಗ ಮತ್ತು ಮಿಲಿಟರಿ ತರಬೇತಿ ನೀಡಲು ಸಹಾಯ ಮಾಡುತ್ತದೆ ಮತ್ತು ಅವರಲ್ಲಿ ಶೇಕಡಾ 25 ರಷ್ಟು (ಅಗ್ನಿವೀರ್ಸ್) ಸಶಸ್ತ್ರ ಪಡೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇಷ್ಟಾದರೂ ಕೆಲವರು ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿಗೆ ಬೆಂಕಿ ಹಚ್ಚುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

ಯೋಜನೆ ವಿರುದ್ಧ ಪ್ರತಿಭಟನೆ ನಡೆಸಿ ಅಮಾಯಕರನ್ನು ದಾರಿ ತಪ್ಪಿಸಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಭಾಗಿಯಾಗಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಇದನ್ನೇ ಅವಕಾಶವನ್ನಾಗಿ ಬಳಸಿಕೊಳ್ಳುತ್ತಿವೆ ಎಂದರು. 

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಕುರಿತು ಚರ್ಚಿಸಲಿ ಮತ್ತು ಮನವಿ ಪತ್ರಗಳನ್ನು ಸಲ್ಲಿಸಲಿ. ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಯಾವುದೇ ಸಮಸ್ಯೆ ಇಲ್ಲ, ಆದರೆ, ಅವರು ಕಾನೂನನ್ನು ಕೈಗೆತ್ತಿಕೊಂಡರೆ ನಾವು ಸಹಿಸುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT