ರಾಜ್ಯ

ಮೋದಿ ಸ್ವಾಗತಕ್ಕೆ ಹಾಕಿದ್ದ ಫ್ಲೆಕ್ಸ್ ಗಳಿಗೆ ಮಸಿ ಬಳಿದ ಕರವೇ

Srinivas Rao BV

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್ಸ್ ಕನ್ನಡ ಪರ ಸಂಘಟನೆಯವರ ಕೆಂಗಣ್ಣಿಗೆ ಗುರಿಯಾಗಿದೆ.

ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಸಂಜೆ ಮೈಸೂರು ರಸ್ತೆಯಲ್ಲಿ ಅಳವಡಿಸಲಾಗಿದ್ದ ನೂರಾರು ಹಿಂದಿ ಫ್ಲೆಕ್ಸ್ ಗಳಿಗೆ ಮಸಿ ಬಳಿದು ಪ್ರತಿಭಟಿಸಿದರು.

ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಮೋದಿ ಸ್ವಾಗತಕ್ಕೆ  ಹಿಂದಿ ಭಾಷೆಯ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು.  ಇದಕ್ಕೆ ಕೆರಳಿದ ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಕಾರ್ಯಕರ್ತರು ಫ್ಲೆಕ್ಸ್ ಗಳಿಗೆ ಮಸಿ ಬಳಿದರು. ಪೊಲೀಸರು ಅಡ್ಡಿ ಪಡಿಸಿದರೂ ಸಹ ಫ್ಲೆಕ್ಸ್ ಗಳಿಗೆ ಮಸಿ ಬಳಿಯಲಾಯಿತು. ಕರ್ನಾಟಕದಲ್ಲಿ ಹಿಂದಿಹೇರಿಕೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

ವಿರೋಧಕ್ಕೆ ಮಣಿದ ಬಿಜೆಪಿ ಬಳಿಕ  ಫ್ಲೆಕ್ಸ್ ಗಳನ್ನು ಬಿಜೆಪಿ ಮುಖಂಡರೇ ತೆರವುಗೊಳಿಸಿದ್ದು ಕಂಡುಬಂತು.

SCROLL FOR NEXT