ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ರಾಜ್ಯ

'ನರೇಂದ್ರ ಮೋದಿ ಬಂದು ಯೋಗ ಮಾಡುವುದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆ'

ಪ್ರಧಾನಿ ನರೇಂದ್ರ ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಗದಗ: ಮುಂದಿನ ವರ್ಷ ಮೇ ತಿಂಗಳಲ್ಲಿ ಚುನಾವಣೆ ಆಗುತ್ತೆ‌, ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದಿರೋದು ಚುನಾವಣೆಗೆ ಅನುಕೂಲವಾಗುತ್ತದೆ, ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಮಿಲಿಟರಿ ಸೇರಬೇಕು ಎನ್ನುವವರು ದೇಶ ಭಕ್ತರು ಅಲ್ವಾ ಎಂದು ಪ್ರಶ್ನಿಸಿದ ಅವರು, ಅವರಿಗೆ ದೇಶದ ಬಗ್ಗೆ ಪ್ರೀತಿ, ಪ್ರೇಮ, ಸ್ವಾಭಿಮಾನ ಇರಬೇಕು. ಲಾರಿ, ರೈಲು ಸುಡುತ್ತಾರೆ. ಇಂತವರು ಆರ್ಮಿಗೆ ಸೇರಿ ಏನು ಕೆಲಸ ಮಾಡ್ತಾರೆ ಎಂದು ಪ್ರತಿಭಟನಾಕಾರರ ವಿರುದ್ಧ ಹರಿಹಾಯ್ದರು.

ಇವರು ಯಾವ ದೇಶವನ್ನು ಉದ್ಧಾರ ಮಾಡ್ತಾರೆ, ಅವರನ್ನು ಯಾವುದೋ ಒಂದು ಶಕ್ತಿ ಪ್ರಚೋದನೆ ಮಾಡುತ್ತಿದೆ ಎಂದ ಪಾಟೀಲ್, ಅಷ್ಟೊಂದು ಯುವಕರು ಸಡನ್ ಆಗಿ ಹೇಗೆ ಸೇರುತ್ತಾರೆ. ಪಟ್ಟಭದ್ರ ಹಿತಾಸಕ್ತಿಗಳು ಇವರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ. ಮೋದಿಯವರ ವರ್ಚಸ್ಸು ಕುಗ್ಗಿಸಲು ಯುವಕರನ್ನು ಪ್ರಚೋದನೆ ಮಾಡಿ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ದಯಮಾಡಿ ಯುವಕರು ಇದಕ್ಕೆ ಕಿವಿಗೊಡಬಾರದು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!