ಸಿಎಂ ಬೊಮ್ಮಾಯಿ 
ರಾಜ್ಯ

ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.

ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಳು. ಶಂಕ್ರಮ್ಮನ ಮನವಿಗೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಮಗು ಕೃಷ್ಣವೇಣಿಯ ಚಿಕಿತ್ಸೆಗೆ ನೆರವು ನೀಡುವ ಭರವಸೆ ನೀಡಿದರು.

ಇದಾಗಿ ಎರಡು ತಾಸಿನೊಳಗೆ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಪತ್ರ ಬರೆದು, ಕೃಷ್ಣವೇಣಿಯ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆ ಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳ ಮಾತು ಕೆಲವೇ ಗಂಟೆಗಳಲ್ಲಿ ಅಧಿಕೃತ ಭರವಸೆಯಾಗಿದೆ ಮುಖ್ಯಮಂತ್ರಿಗಳ ಈ ಸ್ಪಂದನೆಗೆ ಮಗುವಿನ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video