ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆಗೆ ಅನುಮತಿಯಿಲ್ಲ: ಬಿಬಿಎಂಪಿ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ಬಿಬಿಎಂಪಿ ಅನುಮತಿ ನಿರಾಕರಿಸಿದೆ.

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ಬಿಬಿಎಂಪಿ ಅನುಮತಿ ನಿರಾಕರಿಸಿದೆ.

ವಂದ ಮಾತರಂ ಸೇವಾ ಸಮಾಜಂ, ವಿಶ್ವ ಸನಾತನ ಪರಿಷತ್, ಶ್ರೀರಾಮ ಸೇನೆ ಮತ್ತಿತರರು ಯೋಗ ದಿನಾಚರಣೆ, ಸ್ವಾತಂತ್ರ್ಯ ದಿನಾಚರಣೆ, ಗಣೇಶ ಉತ್ಸವದಂದು ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಬಿಬಿಎಂಪಿ ಜಂಟಿ ಆಯುಕ್ತ ಎಸ್.ಎಂ.ಶ್ರೀನಿವಾಸ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಬಿಬಿಎಂಪಿ ನಿರಾಕರಿಸಿದೆ ಎಂದು ತಿಳಿದುಬಂದಿದೆ.

“ನಾವು ಎರಡು ದಿನಗಳ ಹಿಂದೆ ಪಶ್ಚಿಮ ವಲಯದ ಜಂಟಿ ಆಯುಕ್ತ ಎಸ್‌ಎಂ ಶ್ರೀನಿವಾಸ ಅವರನ್ನು ಭೇಟಿ ಮಾಡಿದ್ದೆವು. ಬಿಬಿಎಂಪಿಯು ಭೂಮಿಯನ್ನು ತನ್ನ ಆಸ್ತಿ ಎಂದು ಹೇಳಿದ್ದು, ವಕ್ಫ್ ಮಂಡಳಿ ಕೂಡ ಈ ಆಸ್ತಿಯ ಬಗ್ಗೆ ದಾಖಲೆಗಳನ್ನು ಸಲ್ಲಿಸಿದೆ ಎಂದು ತಿಳಿಸಿದರು.

ಅದನ್ನು ಪರಿಶೀಲಿಸಲು ಎರಡು ವಾರಗಳ ಕಾಲಾವಕಾಶ ಬೇಕು ಎಂದು ಬಿಬಿಎಂಪಿ ತಿಳಿಸಿದ್ದು, ಹೀಗಾಗಿ ಯೋಗ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿದೆ’ ಎಂದು ಶ್ರೀರಾಮ ಸೇನೆಯ ಬೆಂಗಳೂರು ಅಧ್ಯಕ್ಷ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ಕಳೆದ ವಾರ ಪಾಲಿಕೆ ಯಥಾಸ್ಥಿತಿಗೆ ಆದೇಶ ನೀಡಿತ್ತು. ಶಾಸಕ ಬಿ.ಝಡ್.ಜಮೀರ್ ಅಹಮ್ಮದ್ ಖಾನ್, ಬಿಜೆಪಿ ನಾಯಕಿ ಪ್ರೀಮಿಳಾ ನೇಸರ್ಗಿ, ಶಾಸಕ ಆರ್.ವಿ.ದೇವರಾಜ್ ಮತ್ತು ನ್ಯಾಯವ್ಯಾಪ್ತಿಯ ಎಸಿಪಿ ಹಾಜರಿದ್ದ ಶಾಂತಿ ಸಮಿತಿಯ ನಡಾವಳಿ ಪ್ರತಿಯನ್ನು ತಾನು ಪಡೆದಿರುವುದಾಗಿ ಈ ಹಿಂದೆ ಹಿಂದೂ ಜನಜಾಗೃತಿ ಸಮಿತಿ ಹೇಳಿತ್ತು.

1972ರ ದಾಖಲೆಗಳ ಪ್ರಕಾರ 2.5 ಎಕರೆ ಭೂಮಿ ತನ್ನ ಆಸ್ತಿ ಎಂದು ಬಿಬಿಎಂಪಿ ಹೇಳಿದ್ದು, ಇದನ್ನು ವಕ್ಫ್ ಮಂಡಳಿ ನಿರಾಕರಿಸಿದೆ.

ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತರು ಮತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಬಿಬಿಎಂಪಿ ಅನುಮತಿ ನೀಡಿಲ್ಲ, ಏಕೆಂದರೆ ಸಮಸ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಬೇಕಾಗಿರುವುದರಿಂದ ಅನುಮತಿ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!