ಸಂಗ್ರಹ ಚಿತ್ರ 
ರಾಜ್ಯ

ಭಾರತೀಯ ಸೇನೆ-ಸಿಸಿಬಿ ಜಂಟಿ ಕಾರ್ಯಾಚರಣೆ: ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡಿಸುತ್ತಿದ್ದ ವ್ಯಕ್ತಿ ಬಂಧನ

ಭಾರತೀಯ ಸೇನಾಪಡೆ- ಸಿಸಿಬಿ ಜಂಟ ಕಾರ್ಯಾಚರಣೆ ನಡೆಸಿದ್ದು, ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡುತ್ತಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.

ಬೆಂಗಳೂರು: ಭಾರತೀಯ ಸೇನಾಪಡೆ- ಸಿಸಿಬಿ ಜಂಟ ಕಾರ್ಯಾಚರಣೆ ನಡೆಸಿದ್ದು, ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡುತ್ತಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.

ಬಂಧಿತನನ್ನು ಶರ್ಫುದ್ದೀನ್ (41) ಎಂದು ಗುರ್ತಿಸಲಾಗಿದೆ. ಈತನನ್ನು ಸೋಮವಾರ ಬೆಳಿಕ್ಕೆ ಹೆಸರಘಟ್ಟದಲ್ಲಿ ಬಂಧನಕ್ಕೊಳಪಡಿಸಲಾಗಿದೆ. ಆರೋಪಿಯಿಂದ 32 ಸಿಮ್ ಕಾರ್ಡ್‌ಗಳನ್ನು ಹೊಂದಬಹುದಾದ 58 ಸಿಮ್ ಬಾಕ್ಸ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ ಈತ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡು ಮಾಡುತ್ತಿದ್ದ. ಈತನನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್ಐ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದೆ ಎಂಬ ಮಾಹಿತಿಗಳು ತಿಳಿದುಬಂದಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಆರೋಪಿಯು ಅನಿಯಮಿತ ಕರೆ ಸೌಲಭ್ಯವಿರುವ (ಅನ್‌ಲಿಮಿಟೆಡ್) ಸಿಮ್‌ ಕಾರ್ಡ್‌ಗಳನ್ನು ಎಫ್‌ಟಿಸಿ ಬಾಕ್ಸ್, ಮೋಡೆಮ್‌ ಹಾಗೂ ರೂಟರ್‌ಗೆ ಜೋಡಿಸಿದ್ದ. ಇದೇ ಉಪಕರಣದ ಮೂಲಕ ಐಎಸ್‌ಡಿ ಕರೆಗಳನ್ನು ಎಸ್‌ಟಿಡಿ ಕರೆಗಳಿಗೆ ಪರಿವರ್ತಿಸುತ್ತಿದ್ದ. ಇದರಿಂದ ವಿದೇಶಿ ಕರೆಗಳಿಗೂ ಎಸ್‌ಟಿಡಿ ದರವೇ ಅನ್ವಯವಾಗುತ್ತಿತ್ತು. ಕೇಂದ್ರ ಸರ್ಕಾರಕ್ಕೂ ನಷ್ಟವಾಗುತ್ತಿತ್ತು.

‘ಪಾಕಿಸ್ತಾನದಿಂದ ಬರುತ್ತಿದ್ದ ಕರೆಗಳನ್ನು ಆರೋಪಿ ಮಾರ್ಪಾಡು ಮಾಡುತ್ತಿದ್ದ. ಐಎಸ್‌ಐ ಪ್ರತಿನಿಧಿಗಳು, ದೇಶದ ಕೆಲವರ ಜೊತೆ ಮಾತನಾಡುತ್ತಿದ್ದರು. ಭಾರತೀಯ ಸೇನೆ ಹಾಗೂ ಇತರೆ ಮಾಹಿತಿಗಳನ್ನು ತಿಳಿದುಕೊಳ್ಳುತ್ತಿದ್ದರೆಂಬ ಶಂಕೆಗಳಿವೆ. ಆರೋಪಿಯನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಬೇಕಿದೆ’ ಎಂದೂ ಮೂಲಗಳು ಹೇಳಿವೆ.

ಆರೋಪಿ ಕೃತ್ಯವನ್ನು ಪತ್ತೆ ಮಾಡಿದ್ದ ಭಾರತೀಯ ಸೇನೆಯ ಇಂಟೆಲಿಜೆನ್ಸ್ ಅಧಿಕಾರಿಗಳು, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಂತೆ ಸೇನೆ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು, ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡು ಮಾಡುವ ಪ್ರಕರಣಗಳ ಕುರಿತು ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಈ ವೇಳೆ ಬೆಂಗಳೂರಿನ ಉತ್ತರ ಭಾಗದಲ್ಲಿ ಇದರ ಕೇಂದ್ರವಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ಬಂದಿದ್ದು, ಈ ವೇಳೆ ಶರ್ಫೂದ್ದೀನ್ ನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ, ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳವು ಅಕ್ರಮ ದೂರವಾಣಿ ವಿನಿಮಯ ಕೇಂದ್ರಗಳನ್ನು ನಡೆಸುವುದು, ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸುವುದು ಮತ್ತು ಟೆಲಿಕಾಂಗಳಿಗೆ ನಷ್ಟ ಉಂಟುಮಾಡುವ ಆರೋಪದ ಮೇಲೆ ಏಳು ಜನರನ್ನು ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT