ರಕ್ಷಣೆಗೊಳಗಾಗಿರುವ 15 ಮಂದಿ. 
ರಾಜ್ಯ

ಮಂಗಳೂರಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆ: 15 ಮಂದಿ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್!

ಭಾರತೀಯ ಕರಾವಳಿ ಕಾವಲು ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ನವಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆಯಿಂದ ಸಿರಿಯಾಗೆ ಸೇರಿದ 15 ಮಂದಿಯನ್ನು ರಕ್ಷಣೆ ಮಾಡಿದೆ.

ಮಂಗಳೂರು: ಭಾರತೀಯ ಕರಾವಳಿ ಕಾವಲು ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ನವಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆಯಿಂದ ಸಿರಿಯಾಗೆ ಸೇರಿದ 15 ಮಂದಿಯನ್ನು ರಕ್ಷಣೆ ಮಾಡಿದೆ.

ಕೋಸ್ಟ್ ಗಾರ್ಡ್ ಡಿಐಜಿ ಎಸ್ ಬಿ ವೆಂಕಟೇಶ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೋಸ್ಟ್ ಗಾರ್ಡ್ ಗೆ ಪ್ರಿನ್ಸಸ್ ಮಿರಾಲ್ ಹೆಸರಿನ ಸರಕು ನೌಕೆ ಅಪಾಯಕ್ಕೆ ಸಿಲುಕಿರುವ ಕುರಿತು ಮಾಹಿತಿ ಬಂದಿತ್ತು. ಕೂಡಲೇ ಎರಡು ಕೋಸ್ಟ್ ಗಾರ್ಡ್ ಹಡಗುಗಳಾದ ಐಸಿಜಿಎಸ್ ವಿಕ್ರಮ್ ಮತ್ತು ಐಸಿಜಿಎಸ್ ಅಮರ್ತ್ಯವನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಹಡಗುಗಳು ಸಂಜೆ 5.30 ರ ಹೊತ್ತಿಗೆ ಸ್ಥಳಕ್ಕೆ ತಲುಪಿದ್ದವು, ಈ ವೇಳೆ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ನೌಕೆಯಲ್ಲಿದ್ದ 15 ಮಂದಿಯನ್ನು ರಕ್ಷಣೆ ಮಾಡಿದೆ ಎಂದು ಹೇಳಿದರು.

 ಈ ನೌಕೆ 8 ಸಾವಿರ ಟನ್ ಸ್ಟೀಲ್ ಕೋಲ್ ಅನ್ನು ಹೊತ್ತು ಮಲೇಷ್ಯಾದಿಂದ ಲೆಬನಾನ್‌ಗೆ ತೆರಳುತ್ತಿತ್ತು. ಈಮಧ್ಯೆ ಇಂಜಿನ್'ನ ಒಳಭಾಗದಲ್ಲಿ ಸಣ್ಣ ರಂಧ್ರ ಮೂಲಕ ನೀರು ಒಳಬರಲು ಪ್ರಾರಂಭಿಸಿದೆ. ಇದನ್ನು ತುರ್ತು ದುರಸ್ತಿಪಡಿಸುವ ಸಲುವಾಗಿ ಲಂಗರಿಗೆ ಅವಕಾಶ ಕಲ್ಪಿಸುವಂತೆ ನೌಕೆಯ ಕ್ಯಾಪ್ಟನ್ ಬಂದರು ಅಧಿಕಾರಿಗಳನ್ನು ಸಂಪರ್ಕಿಸಿದ್ದ.

ಇದೇ ವೇಳೆ ಅಪಾಯದಲ್ಲಿದ್ದ ನೌಕೆಯಿಂದ ಕ್ಯಾಪ್ಟನ್ ಹಾಗೂ ಸಿಬ್ಬಂದಿ ಸೇರಿ 15 ಮಂದಿಯನ್ನು ಕೋಸ್ಟ್ ಗಾರ್ಡ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ರಕ್ಷಿಸಿದ 15 ಮಂದಿಯನ್ನು ನವ ಮಂಗಳೂರಿಗೆ ಕರೆದೊಯ್ಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಪೊಲೀಸ್ ಮತ್ತು ವಲಸೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT