ಸಿಎಂ ಬೊಮ್ಮಾಯಿ 
ರಾಜ್ಯ

ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ: ಸಿಎಂ ಬೊಮ್ಮಾಯಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ನಮ್ಮಲ್ಲಿ ಚೈತನ್ಯ ಮತ್ತು ದಕ್ಷತೆಯಿಂದ ಕೆಲಸ ಮಾಡುವ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ನಮ್ಮಲ್ಲಿ ಚೈತನ್ಯ ಮತ್ತು ದಕ್ಷತೆಯಿಂದ ಕೆಲಸ ಮಾಡುವ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ನಮಲ್ಲಿನ ಚೈತನ್ಯವನ್ನು ಹೆಚ್ಚಿಸಿದೆ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಪ್ರೋತ್ಸಾಹವನ್ನೂ ನೀಡಿದಂತಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿಯವರ ರಾಜ್ಯ ಪ್ರವಾಸವನ್ನು ಟೀಕಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಮಾತನಾಡಿದ ಅವರು, ಪ್ರಧಾನಿಯವರು ರಾಜ್ಯಕ್ಕೆ ಸಾವಿರಾರು ಕೋಟಿ ಅನುದಾನದಲ್ಲಿ ಸಹಾಯ ಮಾಡಿದ್ದಾರೆ ಮತ್ತು ಕೋವಿಡ್ ಸಮಯದಲ್ಲಿ ಔಷಧಗಳು, ಲಸಿಕೆಗಳು, ವೆಂಟಿಲೇಟರ್‌ಗಳು ಮತ್ತು ಆಮ್ಲಜನಕ ಘಟಕಗಳ ಪೂರೈಕೆಯನ್ನು ಖಚಿತಪಡಿಸಿದ್ದಾರೆಂದು ಹೇಳಿದರು.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿರುವ ತಮ್ಮ ನಿವಾಸದ ಮುಂದೆ ಪಂಚಮಸಾಲಿ ಮಠಾಧೀಶರು ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿರುವ ಕುರಿತು ಬುಧವಾರ ಸಚಿವ ಸಿಸಿ ಪಾಟೀಲ್ ಹಾಗೂ ಸ್ವಾಮೀಜಿಗಳುಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT