ಮೃತ ಮಕ್ಕಳು ಮತ್ತು ಕಾರ್ಯಾಚರಣೆ ನಿರತ ಪೊಲೀಸರು 
ರಾಜ್ಯ

ಕೌಟುಂಬಿಕ ಸಮಸ್ಯೆ; 3 ಮಕ್ಕಳ ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ, ಪತ್ನಿ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ!

ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಮೂರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. 

ಮಂಗಳೂರು: ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಮೂರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರು (Mangaluru) ಮೂಲ್ಕಿ ಸಮೀಪದ ತಾಳಿಪಾಡಿ ಗ್ರಾಮದ ಪುನರೂರಿನಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ತಂದೆ ವಿಜೇಶ್ ಶೆಟ್ಟಿಗಾರ್ ಎಂಬಾತ ಮಕ್ಕಳಾದ ರಶ್ಮಿತಾ(14), ಉದಯ್ (11), ದಕ್ಷಿತ್ (04)ರನ್ನು ಬಾವಿಗೆ ತಳ್ಳಿ ಕೊಂದು ಹಾಕಿದ್ದಾನೆ. ಕೌಟುಂಬಿಕ ಸಮಸ್ಯೆ ಘಟನೆಗೆ ಕಾರಣ ಎನ್ನಲಾಗಿದ್ದು, ಮಕ್ಕಳನ್ನು ಬಾವಿಗೆ ತಳ್ಳಿದ ಬಳಿಕ ವಿಜೇಶ್ ಶೆಟ್ಟಿಗಾರ್ ತನ್ನ ಪತ್ನಿಯನ್ನು ಎಳೆದುಕೊಂಡು ಹೋಗಿ ಒಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದಾನೆ.  

ಆದರೆ ಸ್ಥಳೀಯರು ತಕ್ಷಣ ಧಾವಿಸಿ ವಿಜೇಶ್ ಮತ್ತು ಆತನ ಪತ್ನಿಯನ್ನ ರಕ್ಷಿಸಿದರೂ ಮೂವರು ಮಕ್ಕಳು ಮಾತ್ರ ಅದಾಗಲೇ ಸಾವನ್ನಪ್ಪಿದ್ದರು.ವಿಜೇಶ್ ಪದ್ಮನ್ನೂರು ಬಳಿ ಹೂವಿನ ವ್ಯಾಪಾರ ‌ನಡೆಸುತ್ತಿದ್ದ ಎನ್ನಲಾಗಿದೆ. ಮುಲ್ಕಿ ಪೊಲೀಸ್ ಠಾಣಾ (Mulki Police Station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ‌ನಡೆಸಿದ್ದಾರೆ. 

ಹಣಕಾಸು ಸಮಸ್ಯೆ ಕಾರಣಕ್ಕೆ ನಿತ್ಯ ಜಗಳ?:  
ವಿಜೇಶ್ ಶೆಟ್ಟಿಗಾರ್ ಹೂವಿನ ವ್ಯಾಪಾರದ ಜೊತೆಗೆ ಕೂಲಿ ಕೆಲಸ ಕೂಡ ಮಾಡುತ್ತಿದ್ದ. ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಹೀಗಾಗಿ ಅನೇಕ ಬಾರಿ ವಿಜೇಶ್ ಮತ್ತು ಪತ್ನಿಯ ಮಧ್ಯೆ ಜಗಳ ನಡೀತಾ ಇದ್ದು, ಹಣಕಾಸು ವಿಚಾರದಲ್ಲಿ ನಿತ್ಯ ಸಂಘರ್ಷ ಇತ್ತು ಎನ್ನಲಾಗಿದೆ. ಇಂದು ಇದೇ ಕಾರಣಕ್ಕೆ ಮತ್ತೆ ಜಗಳ ನಡೆದಿದ್ದು, ಇದರಿಂದ ಆಕ್ರೋಶಗೊಂಡ ವಿಜೇಶ್ ಮೂವರು ಮಕ್ಕಳನ್ನು ಬಾವಿಗೆ ತಳ್ಳಿದ್ದಾನೆ.

ಇದೇ ವೇಳೆ ಹುಡುಕಿಕೊಂಡು ಬಂದ ಪತ್ನಿಯನ್ನು ಕೂಡ ಬಾವಿಗೆ ತಳ್ಳಿದ್ದು, ತಾನೂ ಬಾವಿಗೆ ಹಾರಿದ್ದಾನೆ. ಆದರೆ ಪತ್ನಿ ಮತ್ತು ವಿಜೇಶ್ ಬದುಕಿದ್ದು, ಮೂವರು ‌ಮಕ್ಕಳು ಮಾತ್ರ ಸಾವಿಗೀಡಾಗಿದ್ದಾರೆ. ಪತ್ನಿ  ಲಕ್ಷ್ಮೀ (35) ಮನೆ ಕೆಲಸ ಮಾಡುತ್ತಾ ಜೀವನ ಸಾಗಿಸುತಿದ್ದು, ರಶ್ಮಿತಾ 8ನೇ ತರಗತಿ ಕಟೀಲು ಶಾಲೆ, ಉದಯ 6ನೇ ತರಗತಿ ಪುನರೂರು ಶಾಲೆ ಹಾಗೂ ಅಂಗನವಾಡಿಯಲ್ಲಿ ಕಲಿಯುತ್ತಿರುವ 4 ವರ್ಷದ ದಕ್ಷಿತ್ ಎಂಬ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT