ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 776 ಸೇರಿ ರಾಜ್ಯದಲ್ಲಿ 816 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 816 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,449ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 816 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,449ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 776 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,99,456ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 703 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,19,155ಕ್ಕೆ ಏರಿಕೆಯಾಗಿದೆ. ಇನ್ನು 5180 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್