ಕಳಪೆ ಕಾಮಗಾರಿ 
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಸಂದರ್ಭ ಕಳಪೆ ರಸ್ತೆ ಕಾಮಗಾರಿಗಾಗಿ ಎಂಜಿನಿಯರ್‌ಗಳಿಗೆ ನೋಟಿಸ್‌

ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

ಬೆಂಗಳೂರು: ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.ಆರ್‌ಆರ್‌ನಗರದ ಕಾರ್ಯಪಾಲಕ ಎಂಜಿನಿಯರ್‌ ಎಂಟಿ ಬಾಲಾಜಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್‌ಜೆ ರವಿ ಮತ್ತು ಸಹಾಯಕ ಎಂಜಿನಿಯರ್‌ ಐಕೆ ವಿಶ್ವಾಸ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಪ್ರಧಾನಿ ಮೋದಿಯವರ ಭೇಟಿಯ ವೇಳೆ ಬಿಬಿಎಂಪಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿತ್ತು. ಆದರೆ, ಮೋದಿ ನವದೆಹಲಿಗೆ ತೆರಳಿದ ನಂತರ ಹಲವು ಪ್ರದೇಶಗಳಲ್ಲಿ ಟಾರ್ ಕಿತ್ತು ಬಂದ ನಂತರ ಬಿಬಿಎಂಪಿಯನ್ನು ಹಲವು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಟೀಕಿಸುತ್ತಿವೆ.

ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ನಂತರ ಬಿಬಿಎಂಪಿ  ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ,ನಿರ್ಲಕ್ಷ್ಯದ ಶಂಕೆ ವ್ಯಕ್ತಪಡಿಸಿದ್ದು, ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.

ರಸ್ತೆಗಳು, ಚರಂಡಿಗಳು, ಬೀದಿ ದೀಪಗಳು ಮತ್ತು ಹೊಸದಾಗಿ ಟಾರ್ ಮಾಡಿದ ರಸ್ತೆಗಳಲ್ಲಿ ಬಿಳಿ ಗೆರೆ ಹಾಕಲು 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಬಿಎಂಪಿ ಹೇಳಿಕೊಂಡಿದೆ. ಹೆಚ್ಚಿನ ಅವಧಿಯನ್ನು ಕಾಯ್ದುಕೊಂಡು ಕಾಮಗಾರಿ ನಡೆಸಲಾಗಿದೆ ಎಂದು ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದಾರೆ.

ಕಾಮಗಾರಿಯನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ಸರಿಪಡಿಸಲು ತಿಳಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT