ಕಳಪೆ ಕಾಮಗಾರಿ 
ರಾಜ್ಯ

ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.

ನಾಗರಭಾವಿಯ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್  ಮತ್ತು ಹೆಬ್ಬಾಳ ಬಳಿಯ ಮರಿಯಪ್ಪನಪಾಳ್ಯ, ಹೆಚ್ ಎಂಟಿ ಲೇಔಟ್ ನಲ್ಲಿ ಬಿಬಿಎಂಪಿಯಿಂದ ಟಾರ್ ಹಾಕಿದ ಒಂದೆರಡು ದಿನಗಳಲ್ಲಿಯೇ ಕಿತ್ತು ಬಂದಿತ್ತು. ಈ ಬಗ್ಗೆ ಮಾಧ್ಯಮಗಳ ಬಂದ ವರದಿ ಆಧರಿಸಿ ಬಿಬಿಎಂಸಿ ಮೂವರು ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿತ್ತು.

9 ಕಿಲೋ ಮೀಟರ್ ರಸ್ತೆ ಮಾಡಲು 11. 50 ಕೋಟಿ ರೂಪಾಯಿ ವೆಚ್ಚ ಮಾಡಿರುವುದಾಗಿ ಬಿಬಿಎಂಪಿ ಹೇಳಿದೆ. ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಕಡಗಳನ್ನು ಪರಿಶೀಲಿಸುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿರುವುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

ಕಳಪೆ ಕಾಮಗಾರಿ ಸಂಬಂಧ ಮಾಧ್ಯಮಗಳಲ್ಲಿ ವರದಿ ಬಂದ ನಂತರ ಆರ್ ಆರ್ ನಗರ ಉಪ ವಿಭಾಗದ ಮುಖ್ಯ ಎಂಜಿನಿಯರ್ ಎಂಟಿ ಬಾಲಾಜಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹೆಚ್ ಜೆ ರವಿ ಮತ್ತು  ಐಕೆ ವಿಶ್ವಾಸ ವಿರುದ್ಧ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರು ಷೋಕಾಸ್ ನೋಟಿಸ್ ಕಳುಹಿಸಿದ್ದಾರೆ.

ಇದೀಗ ಮತ್ತಷ್ಟು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಗುತ್ತಿಗೆದಾರ ರಮೇಶ್ ಗೆ ದಂಡವನ್ನು ಪಾಲಿಕೆ ವಿಧಿಸಿದೆ. ರಸ್ತೆ ಕಾಮಗಾರಿಯಿಂದಾಗಿ ನಮ್ಮ ವರ್ಚಸ್ಸಿಗೆ ಧಕ್ಕೆಯಾಗಿದೆ. ಆದಾಗ್ಯೂ, ಗುತ್ತಿಗೆದಾರನಿಗೆ ದಂಡ ವಿಧಿಸಲಾಗಿದೆ ಎಂಂದು ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶದ ನಂತರ ಬಿಬಿಎಂಪಿಯಿಂದ ಕಳಪೆ ಕಾಮಗಾರಿ ರಾಷ್ಟ್ರಮಟ್ಟದ ಸುದ್ದಿಯಾಗಿದ್ದು, ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT